ಶಿಕ್ಷಣ

ನಮ್ಮ ರಾಜ್ಯದ ಎಲ್ಲಾ ಮಕ್ಕಳನ್ನು ಉತ್ತಮ ಮಾನವರಾಗಲು, ಸಾಮಾಜಿಕವಾಗಿ ಜವಾಬ್ದಾರಿಯುತ ನಾಗರಿಕರಾಗಲು ಮತ್ತು ಅವರು ಏನೇ ಶ್ರೇಷ್ಠತೆಯನ್ನು ಸಾಧಿಸಲು ಸಕ್ರಿಯಗೊಳಿಸಲು ಮತ್ತು ರಚನಾತ್ಮರಾಗಲು ಅವಶ್ಯವಾಗಿ ಬೇಕಾದ ನಿಗದಿತ ಜ್ಞಾನ, ಕೌಶಲಗಳು ಮತ್ತು ಮೌಲ್ಯಗಳನ್ನು ಹೊಂದಲು ಸಜ್ಜುಗೊಳಿಸುವುದೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಮುಖ ಗುರಿಯಾಗಿದೆ.

 

ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CCSR)

  1. ಉದ್ದೇಶ: ರಾಜ್ಯಾದ್ಯಂತ ಇರುವ ಸರ್ಕಾರಿ ಶಾಲೆಗಳನ್ನು ಉತ್ತಮ ಗುಣಮಟ್ಟದ 'ಕರ್ನಾಟಕ ಪಬ್ಲಿಕ್ ಶಾಲೆಗಳ' (KPS) (LKG ಯಿಂದ 12ನೇ ತರಗತಿಯವರೆಗೆ) ಆಗಿ ಪರಿವರ್ತಿಸಲು ಕರ್ನಾಟಕ ಸರ್ಕಾರವು CCSR ಚೌಕಟ್ಟನ್ನು ರೂಪಿಸಿದೆ.
  2. ಅನುಷ್ಠಾನ ಮಾದರಿ: ಕಟ್ಟುನಿಟ್ಟಾದ CCSR ಮಾರ್ಗಸೂಚಿಗಳ ಅಡಿಯಲ್ಲಿ, ಕಾರ್ಪೊರೇಟ್ ಪಾಲುದಾರರು ಮತ್ತು ಖಾಸಗಿ ದಾನಿಗಳು ಸರ್ಕಾರಕ್ಕೆ ನೇರವಾಗಿ ಹಣವನ್ನು ನೀಡುವುದಿಲ್ಲ. ಬದಲಾಗಿ, ಅವರು ತಮ್ಮದೇ ಆದ ನಿರ್ದಿಷ್ಟ ಅನುಷ್ಠಾನ ಏಜೆನ್ಸಿಗಳ ಮೂಲಕ ಮೂಲಸೌಕರ್ಯ ಯೋಜನೆಗಳಿಗೆ (ಉದಾಹರಣೆಗೆ: ತರಗತಿ ಕೊಠಡಿಗಳು, ವಿಜ್ಞಾನ ಪ್ರಯೋಗಾಲಯಗಳು, ಗ್ರಂಥಾಲಯಗಳು ಮತ್ತು ಸ್ಮಾರ್ಟ್ ಸಂವಾದಾತ್ಮಕ ಕೊಠಡಿಗಳು) ಹಣಕಾಸು ಒದಗಿಸಬೇಕು ಮತ್ತು ಅವುಗಳನ್ನು ನಿರ್ಮಿಸಬೇಕು.
  3. ಆಡಳಿತ: ಈ ನೀತಿಯು ಮುಖ್ಯಮಂತ್ರಿಯವರ ಅಧ್ಯಕ್ಷತೆಯ ರಾಜ್ಯ CCSR ಮೇಲ್ವಿಚಾರಣಾ ಸಮಿತಿಯ ವ್ಯಾಪ್ತಿಗೆ ಒಳಪಡುತ್ತದೆ; ಅಭಿವೃದ್ಧಿ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡಲು ಇಲಾಖಾ ಮತ್ತು ಜಿಲ್ಲಾ ಮಟ್ಟಗಳಲ್ಲಿ ಮೀಸಲಾದ CCSR ಘಟಕಗಳು ಕಾರ್ಯನಿರ್ವಹಿಸುತ್ತವೆ.

Circular & Members PDF                                                          Selected District Schools Overview for Bidar      

 

ಮಧ್ಯಾಹ್ನ ಉಪಹಾರ ಯೋಜನೆ: ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಒಪ್ಪಂದದಲ್ಲಿ ಘೋಷಿಸಲ್ಪಟ್ಟಿರುವಂತೆ ಪ್ರತಿಯೊಬ್ಬ ಹಸಿದ ಮಗುವಿಗೂ ಆಹಾರವನ್ನು ಒದಗಿಸಬೇಕಾಗಿದೆ. ಮಧ್ಯಾಹ್ನ ಉಪಹಾರ ಯೋಜನೆಯು ಒಂದು ಪ್ರತಿಷ್ಠಿತ ಯೋಜನೆಯಾಗಿದ್ದು, ಮಕ್ಕಳು ಆರೋಗ್ಯಪೂರ್ಣವಾಗಿ ಶಕ್ತಿವಂತರು ಹಾಗೂ ದೃಢಕಾಯರಾಗಿ ಬೆಳೆಯಲು ಒಂದು ಸದವಕಾಶ ಕಲ್ಪಿಸುವ ಬದ್ಧತೆಯಿಂದ ಕೂಡಿದ್ದು, ಸಹಕಾರಿಯಾಗಿದೆ. ಸದರಿ ಕಾರ್ಯಕ್ರಮದ ಪ್ರಮುಖ ಉದ್ದೇಶವು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಹಸಿವು ನೀಗಿಸಿ ತನ್ಮೂಲಕ ಅವರ ಕಲಿಕಾ ಸಾಮರ್ಥ್ಯಗಳನ್ನೂ ಮತ್ತು ಸಾಧನೆಗಳನ್ನು ಹೆಚ್ಚಿಸುವುದಾಗಿದೆ.

 

ಶಿಕ್ಷಣ ವಿಶ್ಲೇಷಣಾತ್ಮಕ ವರದಿ 2011-12 Pdf

ಸಂಪರ್ಕಿಸಿ: 

ಡಿಡಿಪಿಐ ಕಚೇರಿ, ರೈಲು ನಿಲ್ದಾಣ ರಸ್ತೆ, ಬೀದರ್ – 585401
ದೂರವಾಣಿ: 08482-233134

ಹೆಚ್ಚಿನ ಮಾಹಿತಿಗಾಗಿ: http://schooleducation.kar.nic.in/